ಕರ್ನಾಟಕದ ಬಳ್ಳಾರಿಯಲ್ಲಿರುವ ಕಲ್ಯಾಣ್ ಜ್ಯುವೆಲರ್ಸ್ ಅಂಗಡಿಯ ಮೇಲೆ ಭಯೋತ್ಪಾದಕ ದಾಳಿ ನಡೆದಿದೆ ಎಂಬ ಆರೋಪಗಳು ಸುಳ್ಳು.

Update: 2024-05-04 11:31 GMT

ಸಾರಾಂಶ:

ಬಳ್ಳಾರಿಯ ಕಲ್ಯಾಣ್ ಜ್ಯುವೆಲರ್ಸ್ ಅಂಗಡಿಯ ಮೇಲೆ ನಡೆದ ಭಯೋತ್ಪಾದಕ ದಾಳಿಯ ಬಗ್ಗೆ ಹಂಚಿಕ್ಕೊಂಡ ಸಾಮಾಜಿಕ ಮಾಧ್ಯಮ ಬಳಕೆದಾರರ ಹೇಳಿಕೆಗಳು ತಪ್ಪು. ಕಲ್ಯಾಣ್ ಜ್ಯುವೆಲರ್ಸ್ ಅಂಗಡಿಯಲ್ಲಿ ಸಂಭವಿಸಿದ ಸ್ಫೋಟವು ಹವಾನಿಯಂತ್ರಣ ಘಟಕದ ಸ್ಫೋಟದ ಪರಿಣಾಮವಾಗಿದೆ ಮತ್ತು ಭಯೋತ್ಪಾದಕ ದಾಳಿಯಲ್ಲ. ಸ್ಫೋಟದ ಪರಿಣಾಮವಾಗಿ ಹಲವಾರು ಜನರು ಗಾಯಗೊಂಡಿದ್ದಾರೆ ಮತ್ತು ಘಟನೆಯಲ್ಲಿ ಭಯೋತ್ಪಾದನೆಯ ಕೋನವನ್ನು ಶಂಕಿಸುವ ಯಾವುದೇ ಅಧಿಕೃತ ಹೇಳಿಕೆಯನ್ನು ಬಿಡುಗಡೆ ಮಾಡಲಾಗಿಲ್ಲ.


ಹೇಳಿಕೆ:

ಕರ್ನಾಟಕದ ಬಳ್ಳಾರಿಯಲ್ಲಿರುವ ಕಲ್ಯಾಣ್ ಜ್ಯುವೆಲರ್ಸ್ ಅಂಗಡಿಯಲ್ಲಿ ಭಯೋತ್ಪಾದಕ ದಾಳಿ ನಡೆದಿದೆ ಎಂದು ಹಲವಾರು ಸಾಮಾಜಿಕ ಮಾಧ್ಯಮ ಬಳಕೆದಾರರು ಹೇಳಿಕೊಂಡಿದ್ದಾರೆ. ಕೆಲವರು ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರವನ್ನು ದೂಷಿಸಿದರು ಮತ್ತು ಈ ವರ್ಷದ ಮಾರ್ಚ್‌ನಲ್ಲಿ ರಾಮೇಶ್ವರಂ ಕೆಫೆ ಸ್ಫೋಟದ ನಂತರ ಇದು ಎರಡನೇ ಘಟನೆಯಾಗಿದೆ ಎಂದು ಗಮನಿಸಿದ್ದಾರೆ. ಎಕ್ಸ್ (ಹಿಂದೆ ಟ್ವಿಟ್ಟರ್) ನಲ್ಲಿ ಹಂಚಿಕೊಂಡ ಅಂತಹ ಒಂದು ಪೋಷ್ಟ್ ಘಟನೆಯ ವೀಡಿಯೋವನ್ನು ಹಂಚಿಕೊಂಡಿದೆ ಮತ್ತು ಅದರ ಶೀರ್ಷಿಕೆಯು ಹೀಗಿದೆ, “@INCIndia ಗೆ ಮತ ನೀಡಿದಕ್ಕಾಗಿ ಧನ್ಯವಾದಗಳು ಕರ್ನಾಟಕ ಮೊದಲು ಅವರು ನಿಮ್ಮ ಓಬಿಸಿ ಮೀಸಲಾತಿಯನ್ನು ಲೂಟಿ ಮಾಡಿ ಮುಸ್ಲಿಮರಿಗೆ ನೀಡಿದ್ದಾರೆ (ಆದೇಶವು ನ್ಯಾಯಾಲಯದಲ್ಲಿದೆ) ಆಗ ಕೆಫೆ ಬ್ಲಾಸ್ಟ್ ಆಗಿತ್ತು, ಈಗ ಕಲ್ಯಾಣ್ ಜ್ಯುವೆಲರ್ಸ್‌ನಲ್ಲಿ ಬ್ಲಾಸ್ಟ್ ನಡೆದಿದೆ. @INCIndia ಗೆ ಇಂದೇನಾಗಿದೆ? (ಕನ್ನಡಕ್ಕೆ ಅನುವಾದಿಸಲಾಗಿದೆ).”

ಇದು ಭಯೋತ್ಪಾದಕ ದಾಳಿ ಮತ್ತು ಇದು ಕರ್ನಾಟಕದ ಇತ್ತೀಚಿನ ಕಾಂಗ್ರೆಸ್ ಆಡಳಿತದ ಅವಧಿಯಲ್ಲಿ ಎರಡನೇ ಘಟನೆ ಎಂದು ಸೂಚಿಸುವ ಪೋಷ್ಟ್ ಗಳನ್ನು ಹಲವಾರು ಇತರ ಸಾಮಾಜಿಕ ಮಾಧ್ಯಮ ಬಳಕೆದಾರರು ಹಂಚಿಕೊಂಡಿದ್ದಾರೆ.

ಬಳ್ಳಾರಿಯಲ್ಲಿ ನಡೆದ ಸ್ಫೋಟವು ಭಯೋತ್ಪಾದನೆಗೆ ಸಂಬಂಧಿಸಿದೆ ಎಂದು ಸೂಚಿಸುವ ವೈರಲ್ ಪೋಷ್ಟ್ ಗಳ ಸ್ಕ್ರೀನ್‌ಶಾಟ್‌ಗಳು.


ಪುರಾವೆ:

ಬಳ್ಳಾರಿಯ ಕಲ್ಯಾಣ್ ಜ್ಯುವೆಲರ್ಸ್ ಅಂಗಡಿಯಲ್ಲಿ ನಡೆದ ಘಟನೆಯ ಸುದ್ದಿ ವರದಿಗಳಿಗಾಗಿ ನಾವು ಕೀವರ್ಡ್ ಸರ್ಚ್ ನಡೆಸಿದ್ದೇವೆ. ಏಸಿ (ಹವಾನಿಯಂತ್ರಣ) ಸ್ಫೋಟದಿಂದ ಘಟನೆ ಸಂಭವಿಸಿದೆ ಎಂದು ಹೇಳುವ ಹಲವಾರು ಸುದ್ದಿ ವರದಿಗಳು ಮತ್ತು ವೀಡಿಯೋಗಳನ್ನು ನಾವು ಕಂಡುಕೊಂಡಿದ್ದೇವೆ. ಮೇ ೩, ೨೦೨೪ ರಂದು “ಕರ್ನಾಟಕ: ಬಳ್ಳಾರಿಯ ಕಲ್ಯಾಣ್ ಜ್ಯುವೆಲರ್ಸ್‌ನಲ್ಲಿ ಎಸಿ ಸ್ಫೋಟಗೊಂಡ ನಂತರ ೬ ಮಂದಿಗೆ ಗಾಯ, ಒಬ್ಬರಿಗೆ ಗಂಭೀರ (ಕನ್ನಡಕ್ಕೆ ಅನುವಾದಿಸಲಾಗಿದೆ),” ಎಂಬ ತಲೆಬರಹದೊಂದಿಗೆ ಏಷ್ಯಾನೆಟ್ ನ್ಯೂಸ್‌ನ ಅಂತಹ ಒಂದು ಸುದ್ದಿ ವರದಿಯು, ಸ್ಫೋಟದಲ್ಲಿ ಆರು ಜನರು ಗಾಯಗೊಂಡಿದ್ದಾರೆ, ಒಬ್ಬರಿಗೆ ಗಂಭೀರ ಗಾಯವಾಗಿದೆ ಎಂದು ಹೇಳಿಕೊಂಡಿದೆ. ಘಟನೆಯು ಮೇ ೨, ೨೦೨೪ ರಂದು ಸಂಜೆ ಸುಮಾರು ೬.೦೦ ಗಂಟೆಗೆ ಸಂಭವಿಸಿದೆ ಮತ್ತು "ಸ್ಟೋರ್‌ನ ಕೇಂದ್ರ ಹವಾನಿಯಂತ್ರಣ ವ್ಯವಸ್ಥೆಯ ಗ್ಯಾಸ್ ರೀಫಿಲ್ ಪ್ರಕ್ರಿಯೆಯಲ್ಲಿನ ಅಸಮರ್ಪಕ ಕಾರ್ಯದಿಂದ ಸಂಭವಿಸಿದೆ" ಎಂದು ಕೂಡ ಹೇಳಿಕೊಂಡಿದೆ. ಘಟನೆಯು ಪ್ರಾಥಮಿಕವಾಗಿ ಹವಾನಿಯಂತ್ರಣ ವ್ಯವಸ್ಥೆಯಲ್ಲಿನ ಶಾರ್ಟ್ ಸರ್ಕ್ಯೂಟ್‌ ನಿಂದಾಗಿ ಸಂಬಂಧಿಸಿದೆ ಎಂದು ಈ ವರದಿಯು ಗಮನಿಸಿದೆ.

ಏಷ್ಯಾನೆಟ್ ನ್ಯೂಸ್‌ನ ಸುದ್ದಿ ವರದಿಯ ಸ್ಕ್ರೀನ್‌ಶಾಟ್.


ಅದೇ ರೀತಿ, ಯೂಟ್ಯೂಬ್‌ನಲ್ಲಿ ಹಂಚಿಕೊಂಡ ಹಿಂದೂಸ್ತಾನ್ ಟೈಮ್ಸ್ ಕನ್ನಡದ ಮತ್ತೊಂದು ಸುದ್ದಿ ವರದಿಯನ್ನು ನಾವು ನೋಡಿದ್ದೇವೆ. ಕರ್ನಾಟಕದ ಬಳ್ಳಾರಿಯಲ್ಲಿರುವ ಕಲ್ಯಾಣ್ ಜ್ಯುವೆಲರ್ಸ್ ಅಂಗಡಿಯಲ್ಲಿ ಹವಾನಿಯಂತ್ರಣ ವ್ಯವಸ್ಥೆಯಲ್ಲಿನ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಉಂಟಾದ ಸ್ಫೋಟದಲ್ಲಿ ಐವರು ಗಾಯಗೊಂಡಿದ್ದಾರೆ ಎಂದು ಈ ವರದಿಯು ಗಮನಿಸಿದೆ.

ಯೂಟ್ಯೂಬ್ ನಲ್ಲಿ ಹಂಚಲಾದ ಹಿಂದೂಸ್ತಾನ್ ಟೈಮ್ಸ್ ಕನ್ನಡ ಸುದ್ದಿ ವೀಡಿಯೋದ ಸ್ಕ್ರೀನ್‌ಶಾಟ್.


ಇದಲ್ಲದೆ, ಮೇ ೩, ೨೦೨೪ ರಂದು ಬಳ್ಳಾರಿಯ ಪೊಲೀಸ್ ವರಿಷ್ಠಾಧಿಕಾರಿ (ಎಸ್ ಪಿ) ಯವರ ಎಕ್ಸ್ ಪೋಸ್ಟ್ ಅನ್ನು ನಾವು ನೋಡಿದ್ದೇವೆ. “ಮೇ ೨ ರಂದು ಬಳ್ಳಾರಿಯ ಬ್ರೂಸ್‌ಪೇಟೆಯಲ್ಲಿರುವ ಕಲ್ಯಾಣ್ ಜ್ಯುವೆಲರ್ಸ್ ಅಂಗಡಿಯಲ್ಲಿ ಹವಾನಿಯಂತ್ರಣದ ದುರಸ್ತಿ ಸಮಯದಲ್ಲಿ ಆಕಸ್ಮಿಕ ಸ್ಫೋಟ ಸಂಭವಿಸಿದೆ. ಐವರು ಗಾಯಗೊಂಡಿದ್ದಾರೆ. ನಿರ್ಲಕ್ಷ್ಯಕ್ಕಾಗಿ ಪ್ರಕರಣ ದಾಖಲಿಸಲಾಗಿದೆ. ಈ ಬಗ್ಗೆ ತಪ್ಪು ಮಾಹಿತಿ ಹರಡುವವರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ (ಕನ್ನಡಕ್ಕೆ ಅನುವಾದಿಸಲಾಗಿದೆ)."

ನಿರ್ಲಕ್ಷ್ಯದಿಂದಲೇ ಸ್ಫೋಟ ಸಂಭವಿಸಿದೆ ಎಂದು ದೃಢಪಡಿಸಿದ ಬಳ್ಳಾರಿ ಎಸ್ಪಿ ಅವರ ಎಕ್ಸ್ ಪೋಷ್ಟ್ ನ ಸ್ಕ್ರೀನ್‌ಶಾಟ್.


ಏರ್ ಕಂಡಿಷನರ್ ರಿಪೇರಿ ಮಾಡುವಾಗ ಈ ಘಟನೆ ಸಂಭವಿಸಿದೆ ಮತ್ತು ಈ ಫ್ಯಾಕ್ಟ್-ಚೆಕ್ ಬರೆಯುವ ಸಮಯದಲ್ಲಿ ಈ ಘಟನೆಯ ಬಗ್ಗೆ ಯಾವುದೇ ಭಯೋತ್ಪಾದಕ ಕೋನ ವರದಿಯಾಗಿಲ್ಲ ಎಂದು ಇವು ತೋರಿಸುತ್ತವೆ. ಸಾಮಾಜಿಕ ಮಾಧ್ಯಮ ಬಳಕೆದಾರರು ಇದನ್ನು ಭಯೋತ್ಪಾದಕ ಘಟನೆ ಎಂದು ತಪ್ಪಾಗಿ ಹಂಚಿಕೊಳ್ಳುತ್ತಿದ್ದಾರೆ ಮತ್ತು ಪ್ರಕ್ರಿಯೆಯಲ್ಲಿ ಕರ್ನಾಟಕ ಸರ್ಕಾರವನ್ನು ದೂಷಿಸುತ್ತಿದ್ದಾರೆ.


ತೀರ್ಪು:

ಮೇ ೨, ೨೦೨೪ ರಂದು ಕರ್ನಾಟಕದ ಬಳ್ಳಾರಿ ಜಿಲ್ಲೆಯಲ್ಲಿ ಸಂಭವಿಸಿದ ಸ್ಫೋಟವನ್ನು ಭಯೋತ್ಪಾದಕ ದಾಳಿಗೆ ಸಂಬಂಧಿಸಿ ಸಾಮಾಜಿಕ ಮಾಧ್ಯಮದಲ್ಲಿ ಮಾಡಲಾದ ಹೇಳಿಕೆಗಳು ತಪ್ಪು. ಜಿಲ್ಲೆಯ ಕಲ್ಯಾಣ್ ಜ್ಯುವೆಲರ್ಸ್ ಅಂಗಡಿಯಲ್ಲಿ ಹವಾನಿಯಂತ್ರಣ ಘಟಕವನ್ನು ದುರಸ್ತಿ ಮಾಡುತ್ತಿದ್ದಾಗ ಶಾರ್ಟ್ ಸರ್ಕ್ಯೂಟ್‌ನಿಂದ ಈ ಘಟನೆ ಸಂಭವಿಸಿದೆ.

Claim :  Allegations of a terror attack taking place at a Kalyan Jewellers store in Karnataka's Ballari are false.
Claimed By :  X user
Fact Check :  False
Tags:    

Similar News