- Home
- /
- ಸತ್ಯ ಪರಿಶೀಲನೆಗಳು
- /
- ಈವೆಂಟ್
- /
- ಕೇರಳದ ಏಕೈಕ ಬಿಜೆಪಿ ಸಂಸದ...
ಕೇರಳದ ಏಕೈಕ ಬಿಜೆಪಿ ಸಂಸದ ಸುರೇಶ್ ಗೋಪಿ ಕೇಂದ್ರ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎಂಬುದು ಸುಳ್ಳು
ಕೇರಳದ ಏಕೈಕ ಬಿಜೆಪಿ ಸಂಸದ ಸುರೇಶ್ ಗೋಪಿ ಅವರು ಕೇಂದ್ರ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾಗಿದ್ದಾರೆ. ಸಚಿವನಾಗಿ ಇರುವುದಕ್ಕಿಂತ, ಸಂಸದನಾಗಿ ಕೆಲಸ ಮಾಡಲು ಅವರು ಬಯಸುತ್ತೇನೆ ಎಂದಿದ್ದಾರೆ ಎಂಬ ಪೋಸ್ಟ್ ಸಾಮಾಜಿಕ ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿದೆ.
ಮೋದಿ 3.0 ಕ್ಯಾಬಿನೆಟ್‌ನಲ್ಲಿ ಭಾನುವಾರ ಕೇಂದ್ರ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಕೆಲವೇ ಗಂಟೆಗಳ ನಂತರ, ಸುರೇಶ್ ಗೋಪಿ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಹುದ್ದೆಯಿಂದ ಮುಕ್ತರಾಗಲು ಮತ್ತು ತ್ರಿಶೂರ್ ಜನರಿಗಾಗಿ ಸಂಸದರಾಗಿ ಕೆಲಸ ಮಾಡಲು ಬಯಸುವುದಾಗಿ ಹೇಳಿದ್ದಾರೆ. ನಟ-ರಾಜಕಾರಣಿ ಸುರೇಶ್ ಗೋಪಿ ಅವರು ಚಲನಚಿತ್ರಗಳಿಗೆ ಸಹಿ ಹಾಕಿದ್ದಾರೆ. ಅವುಗಳನ್ನು ಮುಗಿಸಲೇಬೇಕು ಎಂದು ಹೇಳಿದ್ದಾರೆ ಎಂಬುದಾಗಿ ವರದಿಯಾಗಿತ್ತು.
9 ಜೂನ್ , 2024 ರಂದು, ತ್ರಿಶೂರ್ ಸಂಸದ ಸುರೇಶ್ ಗೋಪಿ ಅವರು ನರೇಂದ್ರ ಮೋದಿಯವರ ಮೂರನೇ ಕ್ಯಾಬಿನೆಟ್‌ನಲ್ಲಿ ರಾಜ್ಯ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಹಾಗಿದ್ದರೆ ಈ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆ ನಿಜವೇ ಎಂದು ಪರಿಶೀಲಿಸೋಣ.
ಫ್ಯಾಕ್ಟ್‌ಚೆಕ್ :
ಸಾಮಾಜಿಕ ಮಧ್ಯಮಗಳಲ್ಲಿ ಹಂಚಿಕೊಳ್ಳಲಾದ ಪೋಸ್fನಲ್ಲಿ ಮಾಡಿದ ಪ್ರತಿಪಾದನೆಯನ್ನು ಪರಿಶೀಲಿಸಲು ಸಂಸದ ಸುರೇಶ್ ಗೋಪಿಯವರ ಟ್ವೀಟ್‌ಅನ್ನು ಪರಿಶೀಲಿಸಿದಾಗ, ನಿನ್ನೆಯಷ್ಟೇ ಕೇಂದ್ರ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದ ಕೇರಳದ ಏಕೈಕ ಬಿಜೆಪಿ ಸಂಸದ ಸುರೇಶ್ ಗೋಪಿ ಅವರು ಕೇಂದ್ರ ಸಚಿವ ಸ್ಥಾನಕ್ಕೆ ರಾಜಿನಾಮೆ ನೀಡುವುದಿಲ್ಲ ಎಂದು ಹೇಳಿದ್ದಾರೆ.
ಕೇಂದ್ರ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಕೇರಳದ ಬಿಜೆಪಿ ಸಂಸದ ಸುರೇಶ್ ಗೋಪಿ ಟ್ವೀಟ್ ಮಾಡಿ, ”ನಾನು ಮೋದಿ ಸರಕಾರದ ಸಚಿವ ಸಂಪುಟಕ್ಕೆ ರಾಜೀನಾಮೆ ನೀಡಲಿದ್ದೇನೆ ಎಂದು ಕೆಲವು ಮಾಧ್ಯಮಗಳು ತಪ್ಪು ಸುದ್ದಿಯನ್ನು ಹರಡುತ್ತಿವೆ. ಇದು ಸಂಪೂರ್ಣ ಸುಳ್ಳು. ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ನಾವು ಕೇರಳದ ಅಭಿವೃದ್ಧಿ ಮತ್ತು ಸಮೃದ್ಧಿಗೆ ಬದ್ಧರಾಗಿದ್ದೇವೆ ಎಂದು ಸ್ಪಷ್ಟಪಡಿಸಿದ್ದಾರೆ.
ಇದಕ್ಕೂ ಮುನ್ನ, ಕೇರಳದ ಬಿಜೆಪಿ ಅಧ್ಯಕ್ಷ ಕೆ ಸುರೇಂದ್ರನ್, ದಕ್ಷಿಣ ರಾಜ್ಯದ ಪಕ್ಷದ ಘಟಕದಲ್ಲಿ ಸಿಬ್ಬಂದಿ ಬದಲಾವಣೆಯಾಗಲಿದೆ ಎಂಬ ವರದಿಗಳನ್ನೂ ಕೂಡ ಸುರೇಶ್ ಗೋಪಿ ತಳ್ಳಿಹಾಕಿದ್ದಾರೆ.
ಕೇರಳದ ತ್ರಿಶೂರ್ ಲೋಕಸಭಾ ಕ್ಷೇತ್ರದಿಂದ ಗೆದ್ದಿರುವ ನಟ-ರಾಜಕಾರಣಿ ಸುರೇಶ್ ಗೋಪಿ ಅವರಿಗೆ ನರೇಂದ್ರ ಮೋದಿ ನೇತೃತ್ವದ ಸರ್ಕಾರದಲ್ಲಿ ಕ್ಯಾಬಿನೆಟ್ ಅಥವಾ MoS (ಸ್ವತಂತ್ರ) ಉಸ್ತುವಾರಿ ನೀಡದಿರುವ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ ಎಂಬ ವರದಿಗಳು ಹರಿದಾಡಿತ್ತು. ಆದರೆ ಅವರು ಇದು “ನಕಲಿ ಸುದ್ದಿ” ಎಂದು ತಳ್ಳಿಹಾಕಿದ್ದಾರೆ.
ಒಟ್ಟಾರೆಯಾಗಿ ಹೇಳುವುದಾದರೆ, ಸುರೇಶ್ ಗೋಪಿ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾಗಿದ್ದಾರೆ ಎಂಬ ವರದಿಗಳು ಸುಳ್ಳು. ಹೊಸದಾಗಿ ರಚನೆಯಾದ ಮೋದಿ ಸರ್ಕಾರದಲ್ಲಿ ಸಚಿವರಾಗಿ ಸೇವೆ ಸಲ್ಲಿಸಲು ಅವರು ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಹಾಗೂ ನನ್ನ ಸಚಿವ ಸ್ಥಾನಕ್ಕೆ ರಾಜೀನಾಮೆ ಕುರಿತು ಹರಡಿರುವ ವದಂತಿಗಳು ಸುಳ್ಳು ಎಂದು ಸ್ಪಷ್ಟಪಡಿಸಿದ್ದಾರೆ. ಹಾಗಾಗಿ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆ ತಪ್ಪಾಗಿದೆ.